Breaking News

ಕಾಳಸಂತೆ IPL ಟಿಕೆಟ್ ಮಾರಾಟಕ್ಕೆ ಬ್ರೇಕ್: 11 ಆರೋಪಿಗಳ ಬಂಧನ

ಬೆಂಗಳೂರು: ಟಿ20 ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕಾಳಸಂತೆ ಮೂಲಕ ಮಾರಾಟ ಮಾಡುತ್ತಿದ್ದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು ₹4.53 ಲಕ್ಷ ಮೌಲ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 7 ಮೊಬೈಲ್ ಫೋನ್‌ಗಳು ಹಾಗೂ 28 ಟಿಕೆಟ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳನ್ನು ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಟಿಕೆಟ್ ಕಾಳಬಜಾರ್ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *