Breaking News

ರಾಷ್ಟ್ರೀಯ ಭದ್ರತಾ ಉಲ್ಲಂಘನೆ: 7 ಜನಕ್ಕೆ ನ್ಯಾಯಾಂಗ ಬಂಧನ

ನವದೆಹಲಿ: ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ ಆರೋಪದಡಿ 6 ಉಕ್ರೇನಿಯನ್ನರು ಸೇರಿದಂತೆ 7 ಮಂದಿ ವಿದೇಶಿ ಪ್ರಜೆಗಳನ್ನು ದೆಹಲಿ ನ್ಯಾಯಾಲಯ ಸೋಮವಾರ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಅವಧಿಯಲ್ಲಿ ತನಿಖಾಧಿಕಾರಿಗಳು ಇವರ ಹಿನ್ನೆಲೆ, ಇವರಿಗೆ ಸ್ಥಳೀಯವಾಗಿ ಯಾರು ಸಹಾಯ ಮಾಡುತ್ತಿದ್ದರು ಮತ್ತು ಇವರ ಭೇಟಿಯ ಅಸಲಿ ಉದ್ದೇಶವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಿದ್ದಾರೆ. ಭಾರತದ ವೀಸಾ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ದೇಶದಲ್ಲಿ ನೆಲೆಸಿರುವ ಶಂಕೆಯ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿತ್ತು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *