Breaking News

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಸೆರೆ

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌ (35) ಎಮದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. , ಏಪ್ರಿಲ್‌ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಆರೋಪಿತನಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಸ್ವಾದೀನಪಡಿಸಿಕೊಂಡು , ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *