Breaking News

8.47 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ಕಳ್ಳತನ

ಶಿವಮೊಗ್ಗ: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಸಾಗರಕ್ಕೆ ಹೊರಟಿದ್ದ ಮಹಿಳೆಯ ಪರ್ಸ್‌ನಲ್ಲಿದ್ದ 179 ಗ್ರಾಂ ಚಿನ್ನದ ಸರ ಹಾಗೂ ₹ 35 ಸಾವಿರ ನಗದನ್ನು ಕಳ್ಳರು ದೋಚಿದ್ದಾರೆ. ಭದ್ರಾವತಿ ತಾಲ್ಲೂಕಿನ ಆನವೇರಿ ನಿವಾಸಿ ವಾಸಂತಿ ಏ.4ರಂದು ಮಗಳೊಂದಿಗೆ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್‌ ಒಳಗೆ ಮತ್ತೊಂದು ಪರ್ಸ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ ₹ 8,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಸ್‌ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *