Breaking News

ಕೊಪ್ಪಳ : ಅಕ್ರಮ ಮರಳುಗಾರಿಕೆ ಪತ್ತೆ; ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ: ತಾಲೂಕಿನ ಕೋಳೂರು ಹತ್ತಿರದ ಹಿರೇಹಳ್ಳ ಪಕ್ಕದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಧಿಕೃತ ಮರಳು ಗುತ್ತಿಗೆದಾರರಿಗೆ ನಿಗದಿಪಡಿಸಿದ ಪ್ರದೇಶವನ್ನು ಮೀರಿ, ಸರ್ಕಾರಿ ಹಳ್ಳದಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ತಹಶೀಲ್ದಾರರು, ಭೂ ವಿಜ್ಞಾನ ಮತ್ತು ಗಣಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ದಾಳಿ ನಡೆಸಿದರು. ದಾಳಿಯ ವೇಳೆ ಹಿಟಾಚಿ ಹಾಗೂ ಬೋಟ್‌ಗಳ ಮೂಲಕ ಮರಳುಗಾರಿಕೆ ನಡೆಯುತ್ತಿರುವುದು ಪತ್ತೆಯಾಯಿತು. ಈ ಸಂಬಂಧ ಮುರುಗಪ್ಪ ವಣಕೇರಿ ಮತ್ತು ನೀಲೇಶ್ ಮದರಖಂಡಿ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *