ಬೆಂಗಳೂರು : ಸಿಲಿಕಾನ್ ಸಿಟಿಯ ಸುಮನಹಳ್ಳಿ ಫ್ಲೈಓವರ್ ಕೆಳಭಾಗದ ಪಾರ್ಕಿಂಗ್ ನಲ್ಲಿ ಆಕಸ್ಮಿಕವಾಗಿ ದ್ವಿಚಕ್ರ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಈ ವೇಳೆ ಅಕ್ಕಪಕ್ಕದ ಕೆಲ ವಾಹಗಳಿಗೂ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಸಂಚಾರ ವ್ಯವಸ್ಥೆ ಕೆಲಕಾಲ ವ್ಯತ್ಯಯಗೊಂಡಿತು. ಆದ್ರೆ ಈ ಘಟನೆಗೆ ನಿಖರ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ. ಈ ಪ್ರದೇಶದಲ್ಲಿ ವಾಹನಗಳ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಖ್ಯವಾಗಿ, ನಗರದಲ್ಲಿ ವಾಹನ ನಿಲುಗಡೆಯನ್ನು ಶಿಸ್ತುಬದ್ಧಗೊಳಿಸಲು ಆಡಳಿತ ಮಂಡಳಿಯು ಹೊಸ ಕ್ರಮಗಳನ್ನು ಕೈಗೊಂಡಿದೆ. ಏಪ್ರಿಲ್ 2026 ರಿಂದ ಜಾರಿಗೆ ಬರುವಂತೆ ಸುಮನಹಳ್ಳಿ ಸುತ್ತಮುತ್ತಲಿನ ಆಯ್ದ ಪ್ರದೇಶಗಳಲ್ಲಿ ಪಾವತಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ನಗರದಲ್ಲಿ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಅಕ್ರಮವಾಗಿ ವಾಹನ ನಿಲ್ಲಿಸುವುದನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ನಿಗದಿಪಡಿಸಿದ ಸ್ಥಳಗಳಲ್ಲಿ ಹಣ ಪಾವತಿಸಿ ವಾಹನ ನಿಲುಗಡೆ ಮಾಡುವುದು ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರೀ ದಂಡ ವಿಧಿಸಲಾಗುವುದು. ಆದ್ರೆ ಪೇಯ್ಡ್ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಗಡಿಯಲ್ಲಿಯೇ ಹೀಗೆ ಬೆಂಕಿ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

