Breaking News

ದಕ್ಷಿಣ ಕನ್ನಡ: ಪೊಲೀಸರ ವಿಶೇಷ ಕಾರ್ಯಾಚರಣೆ; CEIR ಮೂಲಕ ಪತ್ತೆಯಾದ 150 ಮೊಬೈಲ್‌ ವಾರಸುದಾರರಿಗೆ ಹಸ್ತಾಂತರ

ಮಂಗಳೂರು ಸಾರ್ವಜನಿಕರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು CEIR (Central Equipment Identity Register) ತಂತ್ರಜ್ಞಾನ ಬಳಸಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯ ಮೂಲಕ ಒಟ್ಟು 150 ಮೊಬೈಲ್‌ಗಳನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡ ಬಗ್ಗೆ ಸಾರ್ವಜನಿಕರು CEIR ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದರು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಕೇವಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಷ್ಟೇ ಅಲ್ಲದೆ, ಹೊರ ರಾಜ್ಯಗಳಲ್ಲಿದ್ದ ಮೊಬೈಲ್‌ಗಳನ್ನು ಕೂಡ ಪತ್ತೆಹಚ್ಚಲಾಗಿದೆ. ಪತ್ತೆ ಹಚ್ಚಲಾದ 150 ಮೊಬೈಲ್‌ಗಳನ್ನು ಆಯಾ ಠಾಣಾ ಮಟ್ಟದಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಗಿದ್ದು, ಕಳೆದುಕೊಂಡಿದ್ದ ಫೋನ್ ಮತ್ತೆ ಕೈ ಸೇರಿದಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಮೊಬೈಲ್ ಕಳೆದುಕೊಂಡವರು ತಕ್ಷಣವೇ sancharsaathi.gov.in ಪೋರ್ಟಲ್‌ನಲ್ಲಿ ದೂರು ನೀಡುವಂತೆ ಪೊಲೀಸರು ತಿಳಿಸಿದ್ದು, ಈ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *