ಬೆಂಗಳೂರು- ತುಮಕೂರು ರಸ್ತೆಯ ಅಡಕಮಾರನಹಳ್ಳಿಯ ಆಂಜನೇಯ ದೇವಸ್ಥಾನದ ಬಳಿಯ ಆಹಾರ ಪದಾರ್ಥ ಸಂಗ್ರಹಿಸಿದ್ದ ಗೋದಾಮಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಗೋದಾಮು ಹೊತ್ತಿ ಉರಿದಿದೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ನೆಲಮಂಗಲದ ಅಗ್ನಿ ಶಾಮಕದ ಇಲಾಖೆಯ ವಾಹನದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ರಾತ್ರಿ ಒಂದು ಗಂಟೆಯಾದರೂ ಬೆಂಕಿ ನಿಯಂತ್ರಣ ಸಾಧ್ಯವಾಗಿರಲಿಲ್ಲ. ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗೋದಾಮಿನ ಒಳಗೆ ಯಾರಾದರೂ ಇದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಿಂದ ಮತ್ತಷ್ಟು ಅಗ್ನಿಶಾಮಕ ಶಾಮಕ ಇಲಾಖೆಯ ವಾಹನಗಳು ಕಾರ್ಯಾಚರಣೆಗೆ ಬರುತ್ತಿವೆ ಎಂದು ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

