Breaking News

ಐದು ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಭದ್ರಾವತಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ತೀರ್ಥಹಳ್ಳಿ ನಿವಾಸಿ ಕೃಷ್ಣ (34) ಬಂಧಿತ ಆರೋಪಿ. ಈತನ ವಿರುದ್ಧ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಐದು ವರ್ಷಗಳು ತಲೆ ಮರೆಸಿಕೊಂಡಿದ್ದ. ಬಂಧನಕ್ಕೆ ಭದ್ರಾವತಿಯ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಆರೋಪಿ ಇರುವ ಜಾಗದ ಬಗ್ಗೆ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *