Breaking News

ಅಜ್ಜನ ಮನೆಯಲ್ಲಿ 35 ಗ್ರಾಂ ಚಿನ್ನ ಕಳ್ಳತನ ಮಾಡಿದ ಮೊಮ್ಮಗ ವಶಕ್ಕೆ

ಬೆಂಗಳೂರು: ಅಜ್ಜನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಅಪ್ರಾಪ್ತ ಮೊಮ್ಮಗನನ್ನು ಬಾಣಸವಾಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ. ಬಾಲಕನಿಂದ 5 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಈರಪ್ಪರೆಡ್ಡಿ ಲೇಔಟ್‌ನ ನಿವಾಸಿ ನೀಡಿದ ದೂರಿನ ಮೇರೆಗೆ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರರು 2025ರ ಆಗಸ್ಟ್‌ನಲ್ಲಿ ತಮ್ಮ ಮನೆಯ ಬೀರುವಿನಲ್ಲಿ 199 ಗ್ರಾಂ ಚಿನ್ನ ಇಟ್ಟಿದ್ದರು. ಆಸ್ಪತ್ರೆಗೆ ಅಜ್ಜ, ಅಜ್ಜಿ ತೆರಳಿದಾಗ ಮನೆಯಲ್ಲಿದ್ದ ಮೊಮ್ಮಗ, ಚಿನ್ನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು. ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲೂ ಇದೇ ಬಾಲಕ ಸಿಕ್ಕಿಹಾಕಿಕೊಂಡಿದ್ದ. ಬಾಲನ್ಯಾಯ ಮಂಡಳಿಯಲ್ಲಿ ಇರುವ ಮಾಹಿತಿ ಪಡೆದುಕೊಂಡು, ನ್ಯಾಯಾಲಯದಿಂದ ಬಾಡಿ ವಾರಂಟ್‌ ಪಡೆದು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಜ್ಜನ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕದ್ದ ಚಿನ್ನವನ್ನು ಮೈಸೂರಿನ ಚಿನ್ನದ ಅಂಗಡಿಗೆ ಮಾರಾಟ ಮಾಡಿದ್ದ. ಅಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *