Breaking News

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ: ಬ್ಯಾಟರಿ ಗೋದಾಮಿಗೆ ಬೆಂಕಿ: ಆಕಾಶದೆತ್ತರಕ್ಕೆ ದಟ್ಟ ಹೊಗೆ

ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಇಲ್ಲಿನ ಬ್ಯಾಟರಿ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಧಗಧಗನೇ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ. ಬ್ಯಾಟರಿ, ಲೈಟರ್ , ಎಲೆಕ್ಟ್ರಾನಿಕ್ ಐಟಮ್ ಶೇಖರಿಸಿದ್ದ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಎಲೆಕ್ಟ್ರಾನಿಕ್ ಐಟಮ್ ಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನೆ ನಡೆದು 1 ಗಂಟೆ ಕಳೆದರೂ ಯಾವುದೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿಲ್ಲ ಎಂದು ವರದಿಯಾಗಿದೆ. ಈ ಬೆಂಕಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ವಸ್ತುಗಳು ನಾಶವಾಗಿವೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಜಿಎನ್‌ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬ್ಯಾಟರಿ ಗೋದಾಮು ಇದಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *