ಮಾಗಡಿ: ಪಟ್ಟಣದ ಎನ್‌ಇಎಸ್ ವೃತ್ತದ ಬಳಿ ಅಂಗವಿಕಲ ವ್ಯಕ್ತಿಯೊಬ್ಬರ ಪೆಟ್ಟಿಗೆ ಅಂಗಡಿಗೆ ಬುಧವಾರ ರಾತ್ರಿ ಬೆಂಕಿ ಹಚ್ಚಲಾಗಿದೆ. ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಬೆಂಕಿ ನಂದಿಸಿದರು. ಅಂಗಡಿಯಲ್ಲಿದ್ದ ಸುಮಾರು ₹2 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಂಗಡಿ ಮಾಲೀಕ ಕೃಷ್ಣಮೂರ್ತಿ ತಿಳಿಸಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ತಿರುಮಲೆ ನಿವಾಸಿ ಕೃಷ್ಣಮೂರ್ತಿ 11 ವರ್ಷಗಳಿಂದ ಗಾಂಧಿ ಪ್ರತಿಮೆ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಸರ್ಕಲ್ ಬಳಿ ಪೆಟ್ಟಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಏಳು ತಿಂಗಳಿನಿಂದ ಮುಚ್ಚಿದ್ದ ಅಂಗಡಿಯನ್ನು ತಿಂಗಳ ಹಿಂದಷ್ಟೇ ಸ್ಥಳಾಂತರಿಸಿ ವ್ಯಾಪಾರ ಆರಂಭಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

