ಹುಬ್ಬಳ್ಳಿ: ಹಜರತ್ ನಿಜಾಮುದ್ದೀನ್-ಯಶವಂತಪುರ ನಡುವೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12650) ನಲ್ಲಿ ಇಬ್ಬರು ಯುವಕರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ ದೃಶ್ಯಗಳು ಕಂಡುಬಂದಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪ್ರಯಾಣಿಕರ ಭಯವಿಲ್ಲದೆ ರೈಲಿನೊಳಗೇ ಅಸಭ್ಯವಾಗಿ ವರ್ತಿಸಿದ ಯುವಕರ ಕೃತ್ಯವನ್ನು ಸಹಪ್ರಯಾಣಿಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ರೈಲ್ವೆ ಪೊಲೀಸರು ಆರೋಪಿಗಳನ್ನು ಗುರುತಿಸಿ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ರೈಲಿನಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ಭದ್ರತೆಯನ್ನು ಹೆಚ್ಚಿಸಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

