Breaking News

ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ ರೂ ಬೇಡಿಕೆ ಇಟ್ಟಿದ್ದ ಅಧಿಕಾರಿ, ಮೊದಲ ಹಂತವಾಗಿ 1 ಲಕ್ಷ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಾಹಿತಿಯ ಪ್ರಕಾರ, ರಾಘವೇಂದ್ರ ರೆಡ್ಡಿ ಎಂಬ ವ್ಯಕ್ತಿಯಿಂದ ಈ-ಖಾತೆ ಮಾಡಿಕೊಡುವ ಹೆಸರಿನಲ್ಲಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ₹2 ಲಕ್ಷ ಲಂಚ ಕೇಳಿದ್ದರೆಂದು ಆರೋಪಿಸಲಾಗಿದೆ. ಅದರಂತೆ ಮುಂಗಡವಾಗಿ ₹1 ಲಕ್ಷ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ಹಿಡಿಯಲು ಮುಂದಾದರು. ದಾಳಿ ನಡೆಯುತ್ತಿರುವುದು ಗೊತ್ತಾಗುತ್ತಿದ್ದಂತೆ ಸುರೇಶ್ ಶೆಟ್ಟಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸಿರವಾರದಿಂದ ಕವಿತಾಳ ಕಡೆಗೆ ವಾಹನದಲ್ಲಿ ಪರಾರಿಯಾಗಲು ಪ್ರಯತ್ನಿಸಿದರೆಂದು ತಿಳಿದುಬಂದಿದೆ. ಆದರೆ ಸಿನಿಮೀಯ ಶೈಲಿಯ ಕಾರು ಚೇಸ್ ಮೂಲಕ ಲೋಕಾಯುಕ್ತ ತಂಡ ಅಧಿಕಾರಿಯನ್ನು ಬೆನ್ನಟ್ಟಿಕೊಂಡು ಬಂಧಿಸಿದೆ.

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *