Breaking News

ಮೂವರು ಕೊಲೆಪಾತಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಶಿರಸಿ: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಕೊಲೆ ಮಾಡಿದ್ದ ಮೂವರಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದರು. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಹಾಗೂ ಲತಾ ತುಳಸಾಯಿ ಕಿತ್ತೂರಕರ್ ಮತ್ತು ಇನ್ನಿಬ್ಬರು ಸೇರಿ ಕೇಶವ ಎಂಬುವವರನ್ನು 2019 ರ ಅಕ್ಟೋಬರ್ ನಲ್ಲಿ ಕೊಲೆ ಮಾಡಿದ್ದರು. ಹಳಿಯಾಳ ಇನ್ಸ್ ಪೆಕ್ಟರ್ ಬಿ.ಎಸ್. ಲೋಕಾಪುರ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕೊಲೆ ಪ್ರಕರಣವನ್ನು ವಿಚಾರಣೆ ನಡೆಸಿದ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ‌ ಯಲ್ಲಾಪುರ ಪೀಠಾಸಿನ ನ್ಯಾಯಾಧೀಶರಾದ ಕಿರಣ ಕಿಣಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ತಮ್ಮ ಸಮರ್ಥವಾದ ವಾದ ಮಂಡಿಸಿ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *