Breaking News

ದಲಿತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಗುಲ್ಬರ್ಗಾ ವಿವಿಯ ಸಿಬ್ಬಂದಿ ವಜಾ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ ಕಡಗಂಚಿ ವಜಾಗೊಂಡ ಸಿಬ್ಬಂದಿ ಎಂದು ತಿಳಿದುಬಂದಿದೆ. ಎಂ.ಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ, ಅಶ್ಲೀಲ ಪದಗಳಿಂದ ನಿಂದನೆ ಮಾಡುವುದು, ಜಾತಿಯನ್ನು ಗುರಿಯಾಗಿಸಿ ಹೀಯಾಳಿಸುವುದು ಹಾಗೂ ಜೀವ ಬೆದರಿಕೆ ಹಾಕಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ವಿದ್ಯಾರ್ಥಿನಿಯ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಆರೋಪಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *