ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರಿನತ್ತ ಹೊರಟಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲು, ಗಡಿಭಾಗದ ಹಗರಿ ಗ್ರಾಮದ ಬಳಿ ಸಾಗುತ್ತಿದ್ದ ವೇಳೆ ಏಕಾಏಕಿ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೇ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಬೆಂಕಿ ನಿಯಂತ್ರಿಸಲಾಯಿತು. ಇದರಿಂದ ಪ್ರಯಾಣಿಕರಲ್ಲಿ ಕೆಲಕಾಲ ಗಾಬರಿ ಉಂಟಾದರೂ, ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಘಟನೆಯ ಹಿನ್ನೆಲೆ ರೈಲು ಅರ್ಧ ಗಂಟೆ ತಡವಾಗಿ ಪ್ರಯಾಣ ಮುಂದುವರಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

