Breaking News

ಕಳ್ಳತನವಾಗಿದ್ದ 7 ದ್ವಿಚಕ್ರ ವಾಹನ ಜಪ್ತಿ

ಧಾರವಾಡ: ಶಹರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳತನವಾಗಿದ್ದ 7 ದ್ವಿಚಕ್ರ ವಾಹನ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಮಾಳಾಪೂರ ದ್ಯಾಮವ್ವನ ಗುಡಿ ಓಣಿಯ ಶಿವಾನಂದ ಅರ್ಜುನ ಮಾನೆ ಬಂಧಿತ ಆರೋಪಿ. ಈತನಿಂದ ಸುಮಾರು 2,35,000 ರೂಪಾಯಿ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಇಲ್ಲಿನ ಉಪನಗರ ಮತ್ತು ಶಹರ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್​ಗಳನ್ನು ಕಳ್ಳತನ ಮಾಡಿದ್ದ. ಈ ಕುರಿತು ಶಹರ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *