Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ
ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ…
ಮಾಹಿತಿಯ ಪ್ರಕಾರ, ಆರೋಪಿಗಳು ರಾತ್ರಿ ವೇಳೆ ಮನೆಯೊಳಗೆ ಪ್ರವೇಶಿಸಿ ಫೈರೋಜ್ ಪಠಾಣ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಚಾಕುವಿನಿಂದ ಹಲವು ಬಾರಿ ಇರಿತ ಮಾಡಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ…
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಧಾರವಾಡ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳವನ್ನು ಸೀಲ್ ಮಾಡಿ, ಸಾಕ್ಷ್ಯ ಸಂಗ್ರಹ ಕಾರ್ಯ ನಡೆಯುತ್ತಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ…
ಈ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ವೈಷಮ್ಯ, ಹಳೆಯ ದ್ವೇಷ ಅಥವಾ ರಾಜಕೀಯ ಕಾರಣಗಳ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ…
ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷೆಯಲ್ಲಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

