Breaking News

ಉದ್ಯಮಿಗೆ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂ. ದೋಚಿದ್ದ ಇಬ್ಬರು ಅರೆಸ್ಟ್

ಬೆಳಗಾವಿ ಉದ್ಯಮಿ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಇಬ್ಬರನ್ನು ಬೆಳಗಾವಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7ರಿಂದ ಮಾರ್ಚ್ 9 ರವರೆಗೆ ಡಿಜಿಟಲ್ ಅರೆಸ್ಟ್ ಮಾಡಿದ್ದು, ಈ ಅವಧಿಯಲ್ಲಿ ಹಂತ ಹಂತವಾಗಿ 15.45 ಕೋಟಿ ರೂ.ಗಳನ್ನು ಅಜಿತ್ ಗೋಪಾಲಕೃಷ್ಣ ಅವರ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಬೆಳಗಾವಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್ ಕಮಾಂಡ್ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ವೆಂಕದೂತ ಶರತ್ ನಾಯಕ್, ದೇಗಾವತ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಅವರ ಖಾತೆಗಳಿಂದ ಎರಡು ಕೋಟಿ ರೂ. ಜಪ್ತಿ ಮಾಡಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *