Breaking News

ಭಿವಂಡಿ: 23 ಲಕ್ಷ ರೂ. ಮೌಲ್ಯದ ಮರಳು ವಶ

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಂದಾಯ ಇಲಾಖೆ ಸಮರ ಸಾರಿದ್ದು, ಇಲ್ಲಿನ ಕೇವ್ನಿ ಕ್ರೀಕ್ (ಕೊಳ್ಳ) ದಂಡೆಯ ಮೇಲೆ ನಡೆಸಿದ ಮಿಂಚಿನ ದಾಳಿಯಲ್ಲಿ ಅಂದಾಜು 23 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಈ ಭರ್ಜರಿ ಕಾರ್ಯಾಚರಣೆಯು ಪ್ರದೇಶದಲ್ಲಿ ಸಕ್ರಿಯವಾಗಿರುವ ಮರಳು ಮಾಫಿಯಾದ ಜಾಲವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಉಲ್ಲಾಸ್ ನದಿ ಪಾತ್ರದಲ್ಲಿ ಮಿತಿಮೀರಿದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಈ ಖಚಿತ ಮಾಹಿತಿ ಆಧರಿಸಿ ಕಂದಾಯ ಅಧಿಕಾರಿಗಳ ತಂಡ ಕೇವ್ನಿ ಗ್ರಾಮದ ಮೇಲೆ ದಾಳಿ ನಡೆಸಿತು. ಕಾರ್ಯಾಚರಣೆಯ ವೇಳೆ ಅಧಿಕಾರಿಗಳು 15 ಮರಳು ಗುಂಡಿಗಳನ್ನು ಪತ್ತೆಹಚ್ಚಿದ್ದು, ಅಲ್ಲಿ ಸಂಗ್ರಹಿಸಿಡಲಾಗಿದ್ದ ಒಟ್ಟು 456 ಬ್ರಾಸ್ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದೆ. ಜಪ್ತಿ ಮಾಡಲಾದ ಮರಳನ್ನು ಹೆಚ್ಚಿನ ಸುರಕ್ಷತೆಗಾಗಿ ಕೇವ್ನಿ ಪೊಲೀಸ್ ಪಾಟೀಲ್ ನಾರಾಯಣ ಪಾಟೀಲ್ ಅವರ ವಶಕ್ಕೆ ನೀಡಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *