Breaking News

ಕೋಳಾಲದಲ್ಲಿ ಕಿಡಿಗೇಡಿ ಹಚ್ಚಿದ ಬೆಂಕಿಗೆ ಕಾರು, ಬೈಕುಗಳು ಭಸ್ಮ

ಕೊರಟಗೆರೆ: ಮನೆಯ ಮುಂದಿನ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ 1 ಕಾರು ಮತ್ತು 2 ಬೈಕ್‌ಗಳಿಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಎ.11ರ ಶನಿವಾರ ನಡೆದಿದೆ. ಕೊರಟಗೆರೆ ತಾಲೂಕಿನ ಕೋಳಾಲ ಕೆ.ಸಿ.ಎನ್.ಭಾರತ್ ಗ್ಯಾಸ್ ಏಜೆನ್ಸಿ ಮಾಲಕ ವಿರೂಪಾಕ್ಷಯ್ಯ ಅವರಿಗೆ ಸೇರಿದ ಮಹೇಂದ್ರ ಕಂಪನಿಯ ಕಾರು, ರಾಯಲ್ ಎನ್ ಫೀಲ್ಡ್ ಬೈಕ್, ಓಲಾ ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿದೆ. ಬೈಕ್‌ನ್ನು ಎಂದಿನಂತೆ ತಮ್ಮ ಮನೆಯ ಕಾಂಪೌಂಡ್ ನಲ್ಲಿ ನಿಲ್ಲಿಸಲಾಗಿತ್ತು. ತಡರಾತ್ರಿ ಸುಮಾರು 12.40 ರ ಸಮಯದಲ್ಲಿ ಮುಸುಕುಧಾರಿ ಕಿಡಿಗೇಡಿಯೊಬ್ಬ ಕಾಂಪೌಂಡ್ ಪಕ್ಕದಲ್ಲಿ ನಿಂತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬಳಿಕ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಿಡಿಗೇಡಿ ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ ಕಾರು ಹಾಗೂ 2 ಬೈಕ್‌ಗಳು ಸುಟ್ಟು ಕರಕಲಾಗಿದೆ. ಈ ವೇಳೆ ಮನೆಯ ಸುತ್ತ ಹೊಗೆ ಅವರಿಸಿದ್ದು, ಅಕ್ಕಪಕ್ಕದ ಮನೆಯವರು ಕೂಡಲೇ ನೀರು ಸುರಿದು ಆಗುತ್ತಿದ್ದ ಡೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಕುರಿತು ಕೋಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಘಟನೆಯ ದೃಶ್ಯದ ತುಣುಕನ್ನು ವಶಪಡಿಸಿಕೊಂಡು ಬೆಂಕಿ ಹಚ್ಚಿದ ಕಿಡಿಗೇಡಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *