ನಗರದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ಈಫಾ ಹೋಟೆಲ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಒಳಭಾಗದಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಸಿಬ್ಬಂದಿಗಳು ಗಾಬರಿಗೊಂಡು ತಕ್ಷಣವೇ ಅಗ್ನಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಅವಘಡದ ದೃಶ್ಯಗಳನ್ನು ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದಾಗ, ವಿಡಿಯೋ ಮಾಡದಂತೆ ಹೋಟೆಲ್ ಸಿಬ್ಬಂದಿಗಳು ಕೂಗಿ ತಡೆಯಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

