ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲದಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಅಗ್ರಹಾರ ಬೀದಿಯ ಉಮೇಶ್ ಬಂಧಿತ ಆರೋಪಿ. ಈತನಿಂದ 90 ಎಂಎಲ್‌ನ 15 ಪೌಚ್ ವಶಪಡಿಸಿಕೊಂಡಿದ್ದಾರೆ. ಈತ ಅಗ್ರಹಾರದ ಬೀದಿಯ ದೇವಸ್ಥಾನದ ಬಳಿ ಸಾರ್ವಜನಿಕರಿಗೆ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

