Breaking News

ಬೀಜಾಡಿ: ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ದಾರುಣ ಸಾವು

ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಡಿವೈಡರ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಡ್ಡರ್ಸೆ ನೀರುಕೊಡ್ಲು ನಿವಾಸಿ ಶಾರದಾ (55) ಮೃತ ದುರ್ದೈವಿ. ಶಾರದಾ ಅವರು ತಮ್ಮ ಮಗನೊಂದಿಗೆ ಸ್ಕೂಟರ್‌ನಲ್ಲಿ ಕೋಟೇಶ್ವರದ ಅಂಕದಕಟ್ಟೆಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದರು. ಬೀಜಾಡಿ ಡಿವೈಡರ್ ಸಮೀಪ ಸಾಗುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತಿದ್ದ ಶಾರದಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಶಾರದಾ ಅವರ ಮಗ ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯಸ್ತವಾಗಿತ್ತು. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *