ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ದೊಡಮಲದೊಡ್ಡಿಯ ಗ್ರಾಮದ ಮಹಿಳೆಯ ಮಾಂಗಲ್ಯ ಸರ ಕದ್ದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹ 5 ಲಕ್ಷ ಮೌಲ್ಯದ 36.6 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, ದೇವರ ಕಾಸು, ಎರಡು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶ್ರೀನಿವಾಸಪುರ ತಾಲ್ಲೂಕಿನ ಮೊಗಿಲಹಳ್ಳಿ ಗ್ರಾಮದ ಎಂ.ಪ್ರೇಮ್ಕುಮಾರ್ (21) ಬಂಧಿತ ಆರೋಪಿ. ಶ್ರಾವಣಿ ಎಂಬುವರು ಸಂಜೆ ಹುಲ್ಲು ಕತ್ತರಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ ಆರೋಪಿಯು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

