Breaking News

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ `ಹೃದಯಾಘಾತ’ : ಮುಂಬೈನ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ಗಾಯಕಿ ಆಶಾ ಭೋಂಸ್ಲೆ (92) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಏಪ್ರಿಲ್ 11) ಸಂಜೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಅವರು ತುರ್ತು ಚಿಕಿತ್ಸಾ ಘಟಕದಲ್ಲಿ (EMS) ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದ್ದಾರೆ ಎಂದು ವರದಿಯಾಗಿದೆ. ಆಶಾ ಭೋಂಸ್ಲೆ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ, ಅವರ ಮೊಮ್ಮಗಳು ಜನೈ ಭೋಂಸ್ಲೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಅತಿಯಾದ ಸುಸ್ತು ಮತ್ತು ಎದೆಯ ಸೋಂಕಿನಿಂದಾಗಿ ಅಜ್ಜಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಅವರು ಶೀಘ್ರ ಗುಣಮುಖರಾಗುತ್ತಾರೆ ಎಂದು ಆಶಿಸುತ್ತೇವೆ. ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ,” ಎಂದು ಅವರು ವಿನಂತಿಸಿದ್ದಾರೆ. ಎಂಟು ದಶಕಗಳಿಗೂ ಹೆಚ್ಚು ಕಾಲ ಸಾವಿರಾರು ಹಾಡುಗಳ ಮೂಲಕ ರಂಜಿಸಿರುವ ಆಶಾ ಭೋಂಸ್ಲೆ ಅವರ ಆರೋಗ್ಯದ ಬಗ್ಗೆ ಕೇಳಿ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ತಮ್ಮ ನೆಚ್ಚಿನ ಗಾಯಕಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಂಗೀತ ಲೋಕದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಲವು ದಶಕಗಳಿಂದ ಭಾರತೀಯ ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಆಶಾ ಭೋಂಸ್ಲೆ ಅವರಿಗೆ ‘ಪದ್ಮ ವಿಭೂಷಣ’ ಮತ್ತು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *