Breaking News

ಧಾರವಾಡ: ಫೈರೋಜ್‌ ಪಠಾಣ್‌ ಕೊಲೆ ಪ್ರಕರಣ; ಆರು ಮಂದಿ ವಿಚಾರಣೆ

ಕಾಂಗ್ರೆಸ್‌ ಮುಖಂಡ ಫೈರೋಜ್‌ ಪಠಾಣ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆ ಮಾಡಲಾಗಿದೆ. ಹು-ಧಾ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ತಿಳಿಸಿದರು. ‘ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ಧಾರೆ. ಆರು ಮಂದಿ ವಿಚಾರಣೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಮುಖ ಆರೋಪಿ ಪತ್ತೆಗಾಗಿ ಶೋಧ ನಡೆದಿದೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು. ಕಾಶ್ಮಿನಗರದಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಫೈರೋಜ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಘಟನಾ ಪ್ರದೇಶದಲ್ಲಿನ ಸಿ.ಸಿ ಟಿವಿ ಕ್ಯಾಮೆರಾಗಳಲ್ಲಿನ ಫೋಟೆಜ್‌ಗಳನ್ನು ಪರಿಶೀಲನೆ ಮಾಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *