Breaking News

ಮಡಿಕೇರಿಯ ಕಾಫಿ ತೋಟದಲ್ಲಿ ಅನಾಥವಾದ ಹೆಣ್ಣು ಶಿಶು ಪತ್ತೆ!

ಹೆತ್ತವರೇ ಮಗುವನ್ನು ಅನಾಥವಾಗಿ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿಯಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಅದನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಬೇತ್ರಿ ಗ್ರಾಮದ ಹೆಮ್ಮಾಡು ವ್ಯಾಪ್ತಿಯ ಕಾಫಿ ತೋಟದಲ್ಲಿ ಶಿಶು ಅಳುವುದನ್ನು ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಕೆ ಹಾಳೆಯಲ್ಲಿದ್ದ ಮಗು ಜಾರಿತ್ತು. ಬಟ್ಟೆಯಿಲ್ಲದೆ, ಶೀತದಿಂದ ನಡುಗುತ್ತಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ ಗ್ರಾಮಸ್ಥರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಘಟಕದ ಸಿಬ್ಬಂದಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮಗುವು ಸ್ವಲ್ಪ ಅಸ್ವಸ್ಥಗೊಂಡಿದ್ದರಿಂದ ತಕ್ಷಣವೇ ಮಡಿಕೇರಿಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಮತ್ತು ಆರೈಕೆ ನೀಡಲಾಗುತ್ತಿದ್ದು, ಶಿಶುವು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *