Breaking News

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಸಮೀಪ ಅಡಿಕೆ ವ್ಯಾಪಾರಿಯೊಬ್ಬರಿಗೆ ಸೇರಿದ ಕಾರಿನ ಗಾಜು ಒಡೆದು 30 ಲಕ್ಷ ರೂ. ದರೋಡೆ ಮಾಡಲಾಗಿದೆ. ಶನಿವಾರ ರಾತ್ರಿ ಘಟನೆ ನಡೆದಿದೆ.ಶಿರಸಿಯ ಅಡಿಕೆ ವ್ಯಾಪಾರಿ ಅಬ್ದುಲ್ ರಹೀಮ್ ಬ್ಯಾಡಗಿಗೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರುಮೂತ್ರ ವಿಸರ್ಜನೆಗೆ ಹೋದಾಗ ಕಾರಿನ ಗಾಜು ಒಡೆದು 30 ಲಕ್ಷ ರೂ. ದರೋಡೆ. ಶನಿವಾರ ರಾತ್ರಿ 8.30 ರ ವೇಳೆಗೆ ಹಾವಣಗಿ ಕ್ರಾಸ್ ಸಮೀಪ ಮೂತ್ರ ವಿಸರ್ಜನೆಗೆ ಕಾರು ನಿಲ್ಲಿಸಿದಾಗ ಇಬ್ಬರು ವ್ಯಕ್ತಿಗಳು ಕಾರಿನ ಗಾಜನ್ನು ರಾಡ್ ನಿಂದ ಒಡೆಯುತ್ತಿರುವುದು ಕಂಡುಬಂದಿದೆ. ಅವರನ್ನು ತಡೆಯಲು ಹೋದ ಅಬ್ದುಲ್ ರಹಿಮ್ ಮೇಲೆ ಹಲ್ಲೆ ನಡೆಸಿದ ದರೋಡೆಕೋರರು ಕಾರಿನೊಳಗೆ ಪ್ಲಾಸ್ಟಿಕ್ ಚೀಲದಲ್ಲಿದ್ದ 30 ಲಕ್ಷ ರೂ. ದೋಚಿ ತಮ್ಮ ಕಾರಿನಲ್ಲಿ ಪರಾರಿಯಾಗಿದ್ದಾರೆ. ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *