ಚನ್ನಗಿರಿ: ಹಾಸನದಿಂದ ಚಿಕ್ಕೋಡಿಗೆ ಪವರ್ ಕೂಲ್ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಪಾಂಡೋಮಟ್ಟಿ ಗ್ರಾಮ ಮತ್ತು ರಾಜಗೊಂಡನಹಳ್ಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ತಿರುವಿನಲ್ಲಿ ಪಲ್ಟಿಯಾಗಿದೆ. ಶನಿವಾರ ಬೆಳಗಿನ ಜಾವ 3 ಗಂಟೆಗೆ ಹೆದ್ದಾರಿ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದು ಸಮೀಪದ ಅಡಿಕೆ ತೋಟದಲ್ಲಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಬಿಯರ್ ಟಿನ್ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿದ್ದವು. ಸ್ಥಳಕ್ಕೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸಂಜೆ 7 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಚದುರಿಹೋಗಿದ್ದ ಬಿಯರ್ ಟಿನ್ ಮತ್ತು ಬಾಟಲಿಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

