ಬೆಂಗಳೂರು – ಇಲ್ಲಿನ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಮೊಹಮ್ಮದ್ ಮುಲ್ಲಾ ಎಂಬ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ್ದಾನೆ. ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕಾಗಿ ಬಂದಿದ್ದ ಮೊಹಮ್ಮದ್ ಮುಲ್ಲಾ (28 ವರ್ಷ), ಹತ್ತಿರದಲ್ಲೇ ಆಟವಾಡುತ್ತಿದ್ದ 11 ವರ್ಷದ ಹಿಂದೂ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಎರಡು-ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ. ನಂತರ ಮುಲ್ಲಾ ಬಾಲಕಿಯ ಕೈಯಲ್ಲಿ 150 ರೂಪಾಯಿ ಇಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಬಹಳ ಹೊತ್ತಿನವರೆಗೆ ಮಗಳು ಕಾಣಿಸದಿದ್ದಾಗ ಪೋಷಕರು ಆತಂಕಕ್ಕೊಳಗಾಗಿದ್ದರು. ಸ್ವಲ್ಪ ಸಮಯದ ನಂತರ ಬಾಲಕಿ ಮನೆಗೆ ಬಂದಳು. ಅವಳ ಕೈಯಲ್ಲಿ 150 ರೂಪಾಯಿ ಇತ್ತು. ಹಣದ ಬಗ್ಗೆ ಪೋಷಕರು ವಿಚಾರಿಸಿದಾಗ ಅವಳು ಅತ್ಯಾಚಾರದ ಬಗ್ಗೆ ತಿಳಿಸಿದಳು. ಮಗಳ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿದ ಪೋಷಕರು ದಿಗ್ಭ್ರಮೆಗೊಂಡರು. ಪೋಷಕರು ಕೂಡಲೇ ಜ್ಞಾನಭಾರತಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ಮೊಹಮ್ಮದ್ ಮುಲ್ಲಾನನ್ನು ತಕ್ಷಣ ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

