Breaking News

ಬೆಂಗಳೂರು | ₹9.13 ಕೋಟಿ ಮೌಲ್ಯದ ಗಾಂಜಾ ಪತ್ತೆ: ನಾಲ್ವರು ಪೆಡ್ಲರ್‌ ವಶ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹9.13 ಕೋಟಿ ಮೌಲ್ಯದ 26.15 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನಗಳಲ್ಲಿ ಬಂದಿಳಿದ ನಾಲ್ವರು ಪ್ರಯಾಣಿಕರ ಬ್ಯಾಗ್‌ಗಳ ತಪಾಸಣೆ ನಡೆಸಿದಾಗ, ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ನಾಲ್ವರು ಪೆಡ್ಲರ್‌ಗಳನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ₹5.79 ಕೋಟಿ ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿದ್ದವು. ಅದರ ಬೆನ್ನಲ್ಲೇ ಈಗ ಮತ್ತೆ ಅಪಾರ ಪ್ರಮಾಣದ ಡ್ರಗ್ಸ್‌ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಲ್ಲಿ ಕಡಿಮೆ ಬೆಲೆಗೆ ದೊರೆಯುವ ಡ್ರಗ್ಸ್‌ ಅನ್ನು ಕಳ್ಳಸಾಗಣೆ ಮೂಲಕ ನಗರಕ್ಕೆ ಪೂರೈಕೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಸ್ಟಮ್ಸ್ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ವಶಕ್ಕೆ ಪಡೆದಿದ್ದ 524.31 ಕೆ.ಜಿ ಕೆಟಮೈನ್, 4.59 ಕೆ.ಜಿ. ಗಾಂಜಾ ಹಾಗೂ 287.5 ಕೆ.ಜಿ. ಹೈಡ್ರೋಪೋನಿಕ್, 1.17 ಕೆ.ಜಿ ಕೊಕೇನ್‌ ಅನ್ನು ನಾಶಪಡಿಸಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *