Breaking News

ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ಪ್ರಕರಣ ದಾಖಲು

ಪುತ್ತೂರು: ಕೇರಳದಿಂದ ಕೆಂಪುಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸುಳ್ಯಪದವು ಚೆಕ್ ಪೋಸ್ಟ್ ನಲ್ಲಿ ತಡೆದ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎ. 12ರಂದು ಪೊಲೀಸರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಯುತ್ತಿದ್ದಾಗ ಲಾರಿಯೊಂದು ಕೇರಳ ಭಾಗದಿಂದ ಆಗಮಿಸಿದ್ದು, ಅದನ್ನು ತಡೆದು ಪರಿಶೀಲಿಸಿದಾಗ ಕೆಂಪುಕಲ್ಲು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಮಾಡ್ನೂರು ಗ್ರಾಮದ ವಿಶ್ವನಾಥನನ್ನು ವಿಚಾರಿಸಿದಾಗ ಕೆಂಪುಕಲ್ಲನ್ನು ಕೇರಳದಿಂದ ಗುಂಡ್ಯ ಕಡೆಗೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಲಾರಿಯು ಪ್ರಜಾನ್ ಶೆಟ್ಟಿ ಎಂಬವರಿಗೆ ಸೇರಿದ್ದಾಗಿದ್ದು, ಪರವಾನಿಗೆ ಇಲ್ಲದೆ ಸಾಗಾಟ ಮಾಡಿರುವ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *