Breaking News

ಕೋಳಿ ಅಂಕದ ಅಡ್ಡೆಗೆ ಪೋಲಿಸ್ ದಾಳಿ

ವಿಟ್ಲ ಕಸಬಾ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಬಂಧಿತರು. ಉಳಿದ ಆರೋಪಿಗಳನ್ನು ಪೊಲೀಸರು‌ ಬಂಧಿಸಲು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, 1,000 ರೂ. ನಗದು ಹಾಗೂ ಇತರ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *