ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಹೊಂಗಸಂದ್ರದಲ್ಲಿ ಕಾರು ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ ಐಷರಾಮಿ ಕಾರುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ರಾತ್ರಿ ಸುಮಾರು 9 ಗಂಟೆ ವೇಳೆಗೆ ಸಂಭವಿಸಿದ ಈ ಅವಘಡದಲ್ಲಿ BMW ಸೇರಿದಂತೆ ನಾಲ್ಕೈದು ಕಾರುಗಳು ಬೆಂಕಿಗಾಹುತಿಯಾಗಿ ಕರಕಲಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

