ಬೆಂಗಳೂರು : ರಾಜಧಾನಿ ಬೆಂಗಳೂರು ರೌಡಿಗಳ ಅಡ್ಡೆಯಾಗುತ್ತಿದ್ದು, ಮನೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಠಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಿವಶಂಕರ್ ಮೃತ ದುರ್ದೈವಿ ಎಂದು ಗುರುತಿಸಿದ್ದಾರೆ. ಮನೆ ಆವರಣದಲ್ಲೇ ಶಿವಶಂಕರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು ಕ್ಷಣಮಾತ್ರದಲ್ಲಿ ಎಸ್ಕೇಪ್ ಆಗಿದ್ದಾರೆ. ಸೋಮವಾರ ರಾತ್ರಿ ನಡೆದಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಪೋಲಿಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

