Breaking News

ಮದ್ಯ ಸೇವಿಸಿ ಚಾಲನೆ: ಬೆಂಗಳೂರಲ್ಲಿ 747 ಪ್ರಕರಣ ದಾಖಲು

ಬೆಂಗಳೂರು: ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ 747 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ರಸ್ತೆ ಸುರಕ್ಷತೆಗಾಗಿ ಏಪ್ರಿಲ್ 6ರಿಂದ 12ರವರೆಗೆ ವಿಶೇಷ ಕಾರ್ಯಾಚರಣೆಯನ್ನು 53 ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 5091 ವಿವಿಧ ಮಾದರಿಯ ವಾಹನಗಳನ್ನು ಪರಿಶೀಲಿಸಿ, ಮದ್ಯ ಸೇವಿಸಿ ಚಾಲನೆ ಮಾಡಿದ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದೇ ರೀತಿ ಅತಿ ವೇಗವಾಗಿ ವಾಹನ ಚಲಾಯಿಸಿದವರ ವಿರುದ್ಧ 232 ಪ್ರಕರಣಗಳನ್ನು ದಾಖಲಿಸಿಕೊಂಡು, ₹2.33 ಲಕ್ಷ ದಂಡ ಸಂಗ್ರಹಿಸಲಾಗಿದೆ. ಈ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲೂ ಹಮ್ಮಿಕೊಳ್ಳಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *