Breaking News

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಕಾರು 5 ಪಲ್ಟಿ, ಯುವಕ ಸಾವು

ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಬಳಿ ನಡೆದಿದೆ. ಚೆನ್ನೈ ಮೂಲದ ದೇವಾನಂದ್ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸರ್ವೇಶ್ ಎಂಬ ಮತ್ತೋರ್ವ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂಜಾನೆ ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಕ್ರೇಟಾ ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ನಾಲ್ಕೈದು ಬಾರಿ ಪಲ್ಟಿಯಾಗಿರುವ ಸಾಧ್ಯತೆ ವ್ಯಕ್ತವಾಗಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *