Breaking News

ತುಮಕೂರು ಶಿರಾ ಬಳಿ KSRTC ಬಸ್‌ – ಲಾರಿ ನಡುವೆ ಭೀಕರ ಅಪಘಾತ; ಹಲವು ಸಾವು ನೋವು

ತುಮಕೂರು: ಶಿರಾದಿಂದ ಹಿರಿಯೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತಕ್ಕೀಡಾಗಿದ್ದು, ಹಲವು ಸಾವು ನೋವು ಸಂಭವಿಸಿವೆ. ಶಿರಾ ತಾಲೂಕು ದ್ವಾರಾಳು ಬ್ರಿಡ್ಜ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದವರ ಪೈಕಿ 35ಕ್ಕೂ ಹೆಚ್ಚು ಜನರು ಗಾಯಗೊಂಡು, ಈ ಪೈಕಿ 10ಕ್ಕೂ ಹೆಚ್ಚು ಜನರಿಗೆ ತೀವ್ರ ಹಾನಿಯಾಗಿದೆ. ಶ್ರೀಕಾಂತ್ ಮತ್ತು 50 ವರ್ಷದ ಮಹಿಳೆ ಸೇರಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಶಿಡ್ಲಘಟ್ಟ ಡಿಪೋ ಬಸ್ ಎನ್ನಲಾಗಿದೆ. ಗಾಯಾಳುಗಳನ್ನ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *