Breaking News

ಯಲಹಂಕ KIADB ಕಳ್ಳತನ ಭೇದಿಸಿದ ಪೊಲೀಸರು: ಮೂವರು ಆರೋಪಿಗಳು ಬಂಧನ

ಯಲಹಂಕ: KIADB ಕೈಗಾರಿಕಾ ಪ್ರದೇಶದಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್ ತಿಂಗಳಲ್ಲಿ ನಡೆದಿದ್ದ ಈ ಕಳ್ಳತನ ಪ್ರಕರಣದಲ್ಲಿ ಅಲ್ಯೂಮಿನಿಯಂ ಕೇಬಲ್, ಎಲೆಕ್ಟ್ರಿಕಲ್ ಉಪಕರಣಗಳು ಹಾಗೂ ಮಿಷಿನರಿ ಸಾಮಗ್ರಿಗಳನ್ನು ಕದ್ದೊಯ್ದು ಆರೋಪಿಗಳು ಪರಾರಿಯಾಗಿದ್ದರು. ಬಂಧಿತ ಆರೋಪಿಗಳನ್ನು ನಾಸೀರ್ ಹುಸೇನ್, ಮುಂನ್ಸಿಫ್ ಪಾಷಾ ಮತ್ತು ವಿಶ್ವಾಸ್ ಎಂದು ಗುರುತಿಸಲಾಗಿದೆ. ಇವರು ಮೂವರು ಕೆ.ಆರ್. ಪುರಂ ನಿವಾಸಿಗಳಾಗಿದ್ದು, ಒಂದೇ ತಂಡವಾಗಿ ಯೋಜನೆ ರೂಪಿಸಿ ಕಳ್ಳತನ ನಡೆಸುತ್ತಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ಸಂಬಂಧ ಸಿಮ್ ಟೂಲ್ಸ್ ಪ್ರೈ ಲಿ ಕಂಪನಿ ನೀಡಿದ ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬಾಗಲೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ಡ್ರಿಲ್ಲಿಂಗ್ ಮತ್ತು ವೆಲ್ಡಿಂಗ್ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *