Breaking News

ವಿಟ್ಲದಲ್ಲಿ ಅಕ್ರಮ ಸ್ಫೋಟಕ ಸಂಗ್ರಹ: ಆರೋಪಿ ಜಗದೀಶ ಪೂಜಾರಿ ಬಂಧನ

ವಿಟ್ಲ : ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ತನ್ನ ಮನೆಯ ಆವರಣದಲ್ಲಿ ಸುಡುಮದ್ದು ತಯಾರಿಗೆ ಬೇಕಾದ ಸ್ಫೋಟಕ ಸಾಮಗ್ರಿಗಳನ್ನು ಶೇಖರಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ. ಸ್ಥಳ ಪರಿಶೀಲನೆ ವೇಳೆ ಸುಮಾರು 1.9 ಕೆ.ಜಿ ಯಷ್ಟು ಸ್ಫೋಟಕದಂತಹ ಸಂಶಯಾಸ್ಪದ ವಸ್ತು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಗದೀಶ ಪೂಜಾರಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 93/2026 ಕಲಂ: 9B Explosive Act 1884, ಕಲಂ: 5 Explosive Substances Act 1908, ಹಾಗೂ ಕಲಂ: 288 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *