Breaking News

ಅಂತರ ಜಿಲ್ಲಾ ಕಳ್ಳನ ಬಂಧಿಸಿದ ಅಣ್ಣಿಗೇರಿ ಪೋಲಿಸರು

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನವಾಗಿದ್ದ ಸುಮಾರು ₹6 ಲಕ್ಷ ಮೌಲ್ಯದ ಒಟ್ಟು 14 ಮೋಟರ್ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕಳ್ಳತನ ಪ್ರಕರಣಗಳಿಗೆ ಸಂಬಂಧ ಇರಬಹುದೆಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಣ್ಣಿಗೇರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *