Breaking News

ಗಾಂಜಾ ಸೇವನೆ: ಪದವಿ ವಿದ್ಯಾರ್ಥಿ ವಿರುದ್ಧ ಸುಮೊಟೊ ಪ್ರಕರಣ ದಾಖಲು

ಶಿವಮೊಗ್ಗ: ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಪದವಿ ವಿದ್ಯಾರ್ಥಿಯೊಬ್ಬನ ವಿರುದ್ಧ ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.ರಾತ್ರಿ ಗಸ್ತು ವೇಳೆ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಯುವಕನೊಬ್ಬ ಅಸ್ವಸ್ಥನಂತೆ ತೂರಾಡುತ್ತಿರುವುದು ಗಮನಕ್ಕೆ ಬಂದಿದೆ. ವರ್ತನೆ ಶಂಕಾಸ್ಪದವಾಗಿದ್ದರಿಂದ ತಕ್ಷಣ ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದ್ದರಿಂದ ಯುವಕನನ್ನು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷಾ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮಾದಕ ವಸ್ತು ಸೇವನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *