Breaking News

ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ

ಧಾರವಾಡ: ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯದಿಂದ ಎರಡು ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸಾಧಿಕ್ ಶೇರೆವಾಡ ಎಂಬುವವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಭಸ್ಮವಾಗಿದೆ. ದುಷ್ಕರ್ಮಿಗಳು ಮೊದಲು ಮನೆಗೆ ಕಲ್ಲು ತೂರಾಟ ಮಾಡಿ ನಂತರ ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಏಳೆಂಟು ಜನ ದುಷ್ಕರ್ಮಿಗಳು ಜೊತೆ ಸೇರಿ ಈ ಕೃತ್ಯ ನಡೆಸಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಎಸಿಪಿ ಸಿದ್ದನಗೌಡರ, ಇನ್ಸ್ಪೆಕ್ಟರ್ ಪ್ರಭು ಗಂಗೆನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮನೆ ಸುತ್ತಮುತ್ತಲ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *