Breaking News

ಮಲ್ಪೆ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶಿವನಗರ ನಿವಾಸಿ ಎಂ.ಬಾಬು (52) ಬಂಧಿತ ಆರೋಪಿ. ಮಲ್ಪೆ ಎಸ್ಸೈ ಅನೀಲ್ ಕುಮಾರ್ ಡಿ.ನೇತೃತ್ವದಲ್ಲಿ ಕಳೆದ 5 ತಿಂಗಳಿನಿಂದ ಪ್ರಯತ್ನಿಸಿ, ಮಾಹಿತಿ ಕಲೆ ಹಾಕಿ, ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಎಚ್. ಎ.14ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ಎ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *