Breaking News

ಸ್ಫೋಟಕ ತಯಾರಿ: ಬಂಧನ

ವಿಟ್ಲ: ಠಾಣೆ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಮುನ್ನೆಚ್ಚರಿಕೆ ಇಲ್ಲದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಎಂಬುವರು ಮನೆಯ ಆವರಣದಲ್ಲಿ ಸುಡುಮದ್ದು ತಯಾರಿಗೆ ಬೇಕಾದ ಸ್ಫೋಟಕ ಸಾಮಗ್ರಿ ಶೇಖರಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ವಿಟ್ಲ ಠಾಣೆ ಎಸ್‌ಐ ಬಿ.ಎಸ್.ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ. ಸ್ಥಳ ಪರಿಶೀಲನೆ ವೇಳೆ ಸುಮಾರು 1.9 ಕೆ.ಜಿ.ಯಷ್ಟು ಸ್ಫೋಟಕದಂಥ ಸಂಶಯಾಸ್ಪದ ವಸ್ತು ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *