Breaking News

ಅಮಲಿನ ಮಾತ್ರೆ ಮಾರಾಟ

ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ತಿಲಕ್‌ ಪಾರ್ಕ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಜೀರ್‌, ನವೀದ್‌, ಉಮರ್‌, ನಗರದ ಮರಳೂರು ದಿಣ್ಣೆಯ ಶಹಬಾಜ್‌, ಮಹ್ಮದ್‌ ಗೌಸ್‌, ಮಹ್ಮದ್‌ ಇಕ್ಬಾಲ್‌ ಬಂಧಿತರು.ಇವರಿಂದ 100 ಮಾತ್ರೆ ಜಪ್ತಿ ಮಾಡಲಾಗಿದೆ. 6 ಜನರು ಎರಡು ತಂಡ ಮಾಡಿಕೊಂಡು ನಗರದ ವಿವಿಧ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ ಸದಾಶಿವನಗರದ ಖಾಸಗಿ ಕಾಲೇಜು ಬಳಿ ಮಾತ್ರೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಿಲಕ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *