Breaking News

ಗಾಂಜಾ ಬೆಳೆ: ಪೊಲೀಸರ ದಾಳಿ

ಶ್ರೀನಿವಾಸಪುರ ಹಾಗೂ ಯಲ್ದೂರು ಮುಖ್ಯ ರಸ್ತೆಯ ಬಳಿ ಇರುವ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಲಕ್ಷ್ಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಅಕ್ರಮ ಕೃತ್ಯ ನಡೆಯುತ್ತಿತ್ತು ಎನ್ನಲಾಗಿದೆ. ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕ ಕೂಡಲೇ ಶ್ರೀನಿವಾಸಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶಂಕರಾಚಾರ್ ಹಾಗೂ ಅವರ ತಂಡ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಗಾಂಜಾ ಗಿಡಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಮೀನಿನ ಮಾಲೀಕರು ಮತ್ತು ಈ ಅಕ್ರಮ ಬೇಸಾಯದ ಹಿಂದೆ ಇರುವವರ ಪತ್ತೆಗಾಗಿ ತನಿಖೆ ಚುರುಕುಗೊಂಡಿದೆ. ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *