Breaking News

ಮನೆ ಮುಂದೆ ನಿಲ್ಲಿಸಿದ್ದ ನಾಲ್ಕು ಬೈಕ್‌ಗೆ ಬೆಂಕಿ

ಮುಳಬಾಗಿಲು: ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ನಾಲ್ಕೂ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಗರದ ನೂಗಲಬಂಡೆಯ ರಹಮತ್ ನಗರದ ಅಸ್ಲಂಪಾಷ ಎಂಬುವವರಿಗೆ ಸೇರಿದ ನಾಲ್ಕು ದ್ವಿಚಕ್ರ ವಾಹನಗಳನ್ನು ಎಂದಿನಂತೆ ರಾತ್ರಿ ಮನೆಯ ಮುಂದೆ ನಿಲ್ಲಿಸಿ ಬೀಗ ಹಾಕಲಾಗಿತ್ತು. ಆದರೆ, ಮಂಗಳವಾರ ರಾತ್ರಿ ಸುಮಾರು ಮೂರು ಗಂಟೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಭಾರೀ ಬೆಂಕಿ ಉಂಟಾಗಿದೆ. ಇದರಿಂದ ಎಚ್ಚೆತ್ತ ಮನೆಯವರು ಕೂಡಲೇ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಎಲ್ಲಾ ವಾಹನಗಳು ಸುಟ್ಟು ಕರಕಲಾಗಿದ್ದವು. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *